
ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಆದರ್ಶ ಬಡಾವಣೆಯ ಮನೆಯೊಂದಕ್ಕೆ ನುಗ್ಗಿದ ದರೋಡೆಕೋರರು ಯುವತಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ದೋಚಿದ್ದಾರೆ.
ಶನಿವಾರ ಹಾಡಗಗಲೇ ಮಾರುತಿ ಭಜಂತ್ರಿ ಎಂಬುವರ ಮನೆಗೆ ನುಗ್ಗಿದ ಇಬ್ಬರು ದರೋಡೆಕೋರರು ಮನೆಯಲ್ಲಿದ್ದ ಯುವತಿಯನ್ನು ಬೆದರಿಸಿದ್ದಾರೆ. ಕೂಗಾಡಿದರೆ ಕೊಲೆ ಮಾಡುವುದಾಗಿ ಚಾಕು ತೋರಿಸಿ ಬೆದರಿಸಿದ್ದು, ವೇಲ್ ನಿಂದ ಯುವತಿ ಕೈಕಾಲುಗಳನ್ನು ಕಟ್ಟಿ ಹಾಕಿದ್ದಾರೆ.
ಮನೆಯನ್ನು ಹುಡುಕಾಡಿ ಪರ್ಸ್ ನಲ್ಲಿದ್ದ ಚಿನ್ನದ ಉಂಗುರ, ಬೆಳ್ಳಿ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಅಥಣಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದರೋಡೆಕೋರರು ಬಂಧನಕ್ಕೆ ಬಲೆ ಬೀಸಿದ್ದಾರೆ.