ನವದೆಹಲಿ: ಆಗ್ನೇಯ ದೆಹಲಿಯ ಸುಖ್ ದೇವ್ ವಿಹಾರ ಪ್ರದೇಶದಲ್ಲಿ ಅಪಾಯಕಾರಿ ಚಾಲನೆ ಕಾರಣಕ್ಕೆ ರಾಬರ್ಟ್ ವಾದ್ರಾ ಅವರ ವಾಹನಕ್ಕೆ ದಂಡ ವಿಧಿಸಲಾಗಿದೆ.
ಸುಖದೇವ್ ವಿಹಾರ ಪ್ರದೇಶದ ತನ್ನ ಕಚೇರಿಗೆ ಉದ್ಯಮಿ ರಾಬರ್ಟ್ ವಾದ್ರಾ ತೆರಳುತ್ತಿದ್ದ ಸಂದರ್ಭದಲ್ಲಿ ಅಪಾಯಕಾರಿಯಾಗಿ ವಾಹನ ಚಾಲನೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 184 ಅಪಾಯಕಾರಿ ವಾಹನ ಚಾಲನೆ ಅಡಿಯಲ್ಲಿ ಬುಧವಾರ ಬೆಳಗ್ಗೆ ದಂಡ ವಿಧಿಸಲಾಗಿದೆ. ಅವರ ಭದ್ರತಾ ಸಿಬ್ಬಂದಿ ಮತ್ತೊಂದು ವಾಹನದಲ್ಲಿ ಹಿಂಬಾಲಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ರಾಬರ್ಟ್ ವಾದ್ರಾ ಸುಖ್ ದೇವ್ ವಿಹಾರ ಪ್ರದೇಶದಲ್ಲಿರುವ ತಮ್ಮ ಕಚೇರಿಗೆ ತೆರಳುತ್ತಿದ್ದಾಗ ನಿಯಮ ಉಲ್ಲಂಘಿಸಿದ ಕಾರಣಕ್ಕೆ ದಂಡ ವಿಧಿಸಲಾಗಿದೆ. ಅವರ ಚಾಲಕ ವಾಹನವನ್ನು ಚಾಲನೆ ಮಾಡುತ್ತಿದ್ದ. ಬರಾಪುಲ್ಲಾ ಫ್ಲೈಓವರ್ ಬಳಿ ಈ ಘಟನೆ ನಡೆದಿದೆ. ರಾಬರ್ಟ್ ವಾದ್ರಾ ಅವರು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾಗಾಂಧಿ ಅಳಿಯನಾಗಿದ್ದಾರೆ.