ಬೆಂಗಳೂರು : ನಟ ರಾಕಿಂಗ್ ಸ್ಟಾರ್ ಯಶ್ ದಂಪತಿ ಕೋರ್ಟ್ ಮೆಟ್ಟಿಲೇರಿದ್ದು, ಇದರ ವಿಡಿಯೋವೊಂದು ಸಖತ್ ವೈರಲ್ ಆಗಿದೆ.
ಶಾಕ್ ಆಗಬೇಡಿ..! ಇವರು ಕೋರ್ಟ್ ಮೆಟ್ಟಿಲೇರಿದ್ದು ಯಾವುದೋ ವಿವಾದಕ್ಕೆ ಸಂಬಂಧಿಸಿದ್ದಲ್ಲ. ಬದಲಾಗಿ ಒಂದು ಜಾಹೀರಾತಿಗಾಗಿ.
ನಟ ಯಶ್ ಹಾಗೂ ರಾಧಿಕಾ ಪಂಡಿತ್ ಜೋಡಿ ಸನ್ ಫ್ಲವರ್ ಆಯಿಲ್ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದು, ಕೋರ್ಟ್ ದೃಶ್ಯವನ್ನು ಚಿತ್ರೀಕರಿಸಲಾಗಿದೆ.ರಾಧಿಕಾ ಪಂಡಿತ್ ಕಳಪೆ ಪ್ರೊಡಕ್ಟ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದು, ನಟ ಯಶ್ ಅಬ್ಬರದ ವಾದ ಮಂಡಿಸಿದ್ದಾರೆ. ಯಶ್ ವಕೀಲರ ಲುಕ್ ನಲ್ಲಿ ಮಿಂಚಿದ್ದಾರೆ.ಈಗಾಗಲೇ ಹಲವು ಜಾಹೀರಾತುಗಳಲ್ಲಿ ಒಟ್ಟಿಗೆ ನಟಿಸಿರುವ ನಟ ಯಶ್ ಹಾಗೂ ರಾಧಿಕಾ ಪಂಡಿತ್ ಜೋಡಿ ಮತ್ತೊಂದು ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ.