
ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
2023ರಲ್ಲಿ ರೋಹಿಣಿ ಸಿಂಧೂರಿ ಮಾಧ್ಯಮ ಹೇಳಿಕೆ ನೀಡಿದ್ದು, ಬಳಿಕ ಅದನ್ನು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದಾರೆ. ಇದನ್ನು 1.8 ಲಕ್ಷ ಜನ ವೀಕ್ಷಿಸಿದ್ದಾರೆ. ರೋಹಿಣಿ ಸಿಂಧೂರಿ ಅವರ ಅವಹೇಳನಕಾರಿ ಹೇಳಿಕೆ ಬಳಿಕ 6 ತಿಂಗಳವರೆಗೆ ಸಂಬಳ ನೀಡದೇ, ಹುದ್ದೆಯಿಲ್ಲದೇ ವರ್ಗಾಯಿಸಿದ್ದರು. ರೋಹಿಣಿ ಹೇಳಿಕೆಯಿಂದ ತಂಗಿ, ಪತಿ, ಮಕ್ಕಳಿಗೂ ಮಾನಸಿಕ ಯಾತನೆಯಾಗಿದೆ ಎಂದು ಆರೋಪಿಸಿ ಡಿ.ರೂಪಾ ಮೌದ್ಗಿಲ್ ರೋಹಿಣಿ ಸಿಂಧೂರಿ ವಿರುದ್ಧ ಬೆಂಗಳೂರಿನ 57ನೇ ಎಸಿಎಂಎಂ ಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆ ಸಲ್ಲಿಸಿದ್ದರು.
ಈ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದ್ದು, ಇದೀಗ ಮಾನಷ್ಟ ಮೊಕ್ಕದ್ದಮೆ ಪ್ರಕರಣಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿದೆ.