
ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಅವರ ಫೋಟೋ ಪೋಸ್ಟ್, ಬಹಿರಂಗ ಹೇಳಿಕೆ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಇಲಾಖೆ ವಿಚಾರಣೆಗೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಆದೇಶ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಮುಖ್ಯ ಕಾರ್ಯದರ್ಶಿಗಳಿಂದ ಆದೇಶ ನೀಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ರೋಹಿಣಿ ಸಿಂಧೂರಿಯವರ ಫೋಟೋ ಪ್ರಕಟಿಸಿದ್ದ ಡಿ. ರೂಪಾ ಬಹಿರಂಗ ಹೇಳಿಕೆ ನೀಡಿದ್ದರು. ರೋಹಿಣಿ ಸಿಂಧೂರಿ ಅವರೂ ದೂರು ನೀಡಿದ್ದು, ಇಬ್ಬರ ನಡುವಿನ ವಾಕ್ಸಮರ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈಗಾಗಲೇ ಇಬ್ಬರನ್ನು ವರ್ಗಾವಣೆ ಮಾಡಿದ ಸರ್ಕಾರ ಇಲಾಖಾ ವಿಚಾರಣೆಗೆ ಆದೇಶಿಸಿದೆ ಎಂದು ಹೇಳಲಾಗಿದೆ.