ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕಿತ್ತಾಟ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಮುಖ್ಯಮಂತ್ರಿಗಳು ಗರಂ ಆಗಿದ್ದಾರೆ.
ರಾಜ್ಯ ಸರ್ಕಾರದ ಮಾನ ಮರ್ಯಾದೆಯನ್ನು ಮಹಿಳಾ ಅಧಿಕಾರಿಗಳು ಹರಾಜು ಹಾಕುತ್ತಿದ್ದಾರೆ. ಕಿತ್ತಾಡುತ್ತಿರುವ ಡಿ. ರೂಪಾ ಮತ್ತು ರೋಹಿಣಿ ಸಿಂಧೂರಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಅಲ್ಲದೇ, ಅಧಿಕಾರಿಗಳು ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್ ನೀಡಲು ಸಿಎಂ ಸೂಚನೆ ನೀಡಿದ್ದಾರೆ