alex Certify BIG NEWS: ಡಿ. ರೂಪಾ, ರೋಹಿಣಿ ಸಿಂಧೂರಿ ವಿರುದ್ಧ ಕ್ರಮಕ್ಕೆ ಸಿಎಂ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿ. ರೂಪಾ, ರೋಹಿಣಿ ಸಿಂಧೂರಿ ವಿರುದ್ಧ ಕ್ರಮಕ್ಕೆ ಸಿಎಂ ನಿರ್ಧಾರ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದಾರೆ.

ಇಬ್ಬರನ್ನು ವರ್ಗಾವಣೆ ಮಾಡುವ ಅಥವಾ ಕಡ್ಡಾಯ ರಜೆ ಮೇಲೆ ಕಳುಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇಬ್ಬರು ಮಹಿಳಾ ಅಧಿಕಾರಿಗಳ ಕಿತ್ತಾಟದ ವಿಚಾರ ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಇಬ್ಬರ ವಿರುದ್ಧವೂ ಕ್ರಮಕ್ಕೆ ತೀರ್ಮಾನ ಕೈಗೊಂಡಿದ್ದು, ವರ್ಗಾವಣೆ ಅಥವಾ ಕಡ್ಡಾಯ ರಜೆ ಮೇಲೆ ಕಳುಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬರುವ ಮೊದಲೇ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಅಧಿಕಾರಿಗಳು ಹಿಡಿತದಲ್ಲಿಲ್ಲ ಎನ್ನುವ ಮುಜುಗರದಿಂದ ಪಾರಾಗಲು ಕೂಡಲೇ ಕ್ರಮ ಕೈಗೊಳ್ಳುವ ಬಗ್ಗೆ ಸಚಿವರೊಂದಿಗೆ ಸಿಎಂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...