ನವದೆಹಲಿ : 2024 ರ ಟಿ- 20 ವಿಶ್ವಕಪ್ ಗೆದ್ದ ನಂತರ ಟಿ 20 ಅಂತರರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತರಾದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಸಿಡ್ನಿ ಪಂದ್ಯದ ಬಳಿಕ ಟೆಸ್ಟ್ ಕ್ರಿಕೆಟ್’ಗೆ ವಿದಾಯ ಹೇಳಲಿದ್ದಾರೆ ಎಂದು ವರದಿಯಾಗಿದೆ.
ಸಿಡ್ನಿಯಲ್ಲಿ ನಡೆಯಲಿರುವ 2024-25 ರ ಬಾರ್ಡರ್ ಗವಾಸ್ಕರ್ ಟ್ರೋಫಿಯ ಅಂತಿಮ ಟೆಸ್ಟ್ ನಂತರ ಈ ಘೋಷಣೆ ಮಾಡುವ ಸಾಧ್ಯತೆಯಿದೆ.
ವರದಿಯ ಪ್ರಕಾರ, ಟೆಸ್ಟ್ ತಂಡದಲ್ಲಿ ರೋಹಿತ್ ಶರ್ಮಾ ಅವರ ಸ್ಥಾನದ ಬಗ್ಗೆ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ (ಬಿಸಿಸಿಐ) ನಲ್ಲಿ ಉನ್ನತ ಅಧಿಕಾರಿಗಳು ಮತ್ತು ಆಯ್ಕೆದಾರರ ನಡುವೆ ಗೊಣಗಾಟ ನಡೆಯುತ್ತಿದೆ.