alex Certify ಕೊಹ್ಲಿಯನ್ನು ಹೆಗಲ ಮೇಲೆ ಹೊತ್ತುಕೊಂಡ ರೋಹಿತ್​ ಶರ್ಮಾ; ಅತ್ಯುತ್ತಮ ಫೋಟೋ ಎಂದು ಬಣ್ಣಿಸಿದ ನೆಟ್ಟಿಗರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಹ್ಲಿಯನ್ನು ಹೆಗಲ ಮೇಲೆ ಹೊತ್ತುಕೊಂಡ ರೋಹಿತ್​ ಶರ್ಮಾ; ಅತ್ಯುತ್ತಮ ಫೋಟೋ ಎಂದು ಬಣ್ಣಿಸಿದ ನೆಟ್ಟಿಗರು

ಮೇಲ್ಬರ್ನ್​: ಟಿ-20 ವಿಶ್ವಕಪ್ ಟೂರ್ನಿಯ ಸೂಪರ್ 12ರ ಹಂತದಲ್ಲಿ ಭಾನುವಾರ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ, 53 ಎಸೆತಗಳಲ್ಲಿ 82 ರನ್ ಗಳಿಸುವ ಮೂಲಕ ನಾಲ್ಕು ವಿಕೆಟ್ ಗಳಿಂದ ಟೀಂ ಇಂಡಿಯಾ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಈ ಸಾಧನೆಯನ್ನು ಇಡೀ ದೇಶವೇ ಒಂದೆಡೆ ಕೊಂಡಾಡುತ್ತಿದ್ದರೆ, ಅತ್ತ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರನ್ನು ಹೆಗಲು ಮೇಲೆ ಹೊತ್ತು ಸಂಭ್ರಮಿಸಿದ್ದಾರೆ. ಈ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿದ್ದು, ಕೊಹ್ಲಿ ಅವರಿಗೆ ಶುಭಾಶಯಗಳ ಸುರಿಮಳೆಯಾಗುತ್ತಿದೆ.

ವಿಶೇಷ ಗೆಲುವಿನ ನಂತರ ಕೊಹ್ಲಿ ಆನಂದಬಾಷ್ಪ ಸುರಿಸುತ್ತಿದ್ದಂತೆಯೇ ಇದು ತಮ್ಮ ಅತ್ಯುತ್ತಮ ಇನ್ನಿಂಗ್ಸ್ ಎಂದು ಹೇಳಿದರು. ಈ ಸಂದರ್ಭದಲ್ಲಿಯೇ ನಾಯಕ ರೋಹಿತ್ ಶರ್ಮಾ ಕೊಹ್ಲಿ ಅವರನ್ನು ಎತ್ತಲು ಮೈದಾನಕ್ಕೆ ಧಾವಿಸಿ ಎತ್ತಿ ಹಿಡಿದರು. ಇದನ್ನು ಕ್ರಿಕೆಟ್​ ಅಭಿಮಾನಿಗಳು ದಿನದ ಅತ್ಯುತ್ತಮ ಚಿತ್ರ ಎಂದು ಕೊಂಡಾಡುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...