alex Certify ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಮತ್ತೊಂದು ಶಾಕ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಮತ್ತೊಂದು ಶಾಕ್…!

ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಆಡಿದ ಐದೂ ಪಂದ್ಯಗಳಲ್ಲಿ ಪರಾಭವಗೊಂಡಿದ್ದು, ಖಾತೆ ತೆರೆಯಲಾಗದೆ ಕಂಗಾಲಾಗಿ ಕುಳಿತಿದೆ. ಇದರ ಜೊತೆಗೆ ಗಾಯದ ಮೇಲೆ ಬರೆ ಎಳೆದಂತೆ ಮತ್ತೊಂದು ಆಘಾತ ಎದುರಾಗಿದೆ.

ಬುಧವಾರದಂದು ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ನಿಧಾನ ಗತಿ ಬೌಲಿಂಗ್ ಮಾಡಿದ್ದಕ್ಕಾಗಿ ನಾಯಕ ರೋಹಿತ್ ಶರ್ಮಾ ಅವರಿಗೆ 24 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

ಇದರ ಜೊತೆಗೆ ತಂಡದ ಇತರ ಆಟಗಾರರಿಗೂ ತಲಾ 6 ಲಕ್ಷ ರೂಪಾಯಿ ದಂಡ ಹೇರಲಾಗಿದೆ. ರೋಹಿತ್ ಶರ್ಮಾ ಅವರಿಗೆ ನಿಧಾನಗತಿಯ ಬೌಲಿಂಗ್ ಗಾಗಿ ಪ್ರಸಕ್ತ ಐಪಿಎಲ್ ನಲ್ಲಿ ಎರಡನೇ ಬಾರಿ ದಂಡ ವಿಧಿಸಲಾಗಿದ್ದು, ಈ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...