ನ್ಯೂಜಿಲೆಂಡ್ ವಿರುದ್ಧ ನಡೆದ ಟಿ-20 ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಇತಿಹಾಸ ನಿರ್ಮಿಸಿದೆ. ಜೈಪುರದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿದ ಭಾರತ, ವಿಶ್ವದ ಬಲಿಷ್ಠ ತಂಡಗಳಲ್ಲಿ ಒಂದಾಗಿರುವ ಆಸ್ಟ್ರೇಲಿಯಾವನ್ನು ಹಿಂದಿಕ್ಕಿ ವಿಶ್ವ ದಾಖಲೆ ನಿರ್ಮಿಸಿದೆ.
ಬುಧವಾರ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾ, ಟಿ-20 ಮಾದರಿಯ ಪಂದ್ಯದಲ್ಲಿ 50ನೇ ಗೆಲುವು ಸಾಧಿಸಿದೆ. ಈ ಹಿಂದೆ ಯಾವುದೇ ತಂಡ ಈ ಸಾಧನೆ ಮಾಡಿಲ್ಲ. ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ಟಿ20 ಕ್ರಿಕೆಟ್ ನ 49 ಪಂದ್ಯಗಳಲ್ಲಿ ಗೆಲುವು ಸಾಧಿಸಿ 2ನೇ ಸ್ಥಾನದಲ್ಲಿದೆ.
ಟಿ-20 ಗೆಲುವಿನ ಪಟ್ಟಿ
ಭಾರತ -50
ಆಸ್ಟ್ರೇಲಿಯಾ -49
ಪಾಕಿಸ್ತಾನ -49
ಇಂಗ್ಲೆಂಡ್ -42
ದಕ್ಷಿಣ ಆಫ್ರಿಕಾ -35
ನ್ಯೂಜಿಲೆಂಡ್-32
ಶ್ರೀಲಂಕಾ -31
ವೆಸ್ಟ್ ಇಂಡೀಸ್ -31
ಇನ್ನು ಇಂಗ್ಲೆಂಡ್ ಮೂರನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ ನಾಲ್ಕು ಮತ್ತು ನ್ಯೂಜಿಲೆಂಡ್ ಐದನೇ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಶರ್ಮಾ ಪಡೆ 1-0 ಮುನ್ನಡೆ ಸಾಧಿಸಿದೆ.
ಟಿ-20 ವಿಶ್ವಕಪ್ ನಂತ್ರ ಕೊಹ್ಲಿ ನಾಯಕತ್ವ ತೊರೆದಿದ್ದಾರೆ. ಇದು ರೋಹಿತ್ ಶರ್ಮಾ ನಾಯಕತ್ವದಲ್ಲಿ ನಡೆಯುತ್ತಿರುವ ಮೊದಲ ಪಂದ್ಯವಾಗಿತ್ತು.