alex Certify BIG NEWS: ಪಠ್ಯ ಪುಸ್ತಕ ಸಮಿತಿಯಿಂದ ಮತ್ತೊಂದು ಎಡವಟ್ಟು; ಎರಡೂ ತರಗತಿಗಳಿಗೆ ಒಂದೇ ಪದ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಠ್ಯ ಪುಸ್ತಕ ಸಮಿತಿಯಿಂದ ಮತ್ತೊಂದು ಎಡವಟ್ಟು; ಎರಡೂ ತರಗತಿಗಳಿಗೆ ಒಂದೇ ಪದ್ಯ

ಬೆಂಗಳೂರು: ಪಠ್ಯ ಪುಸ್ತಕ ಪರೀಷ್ಕರಣೆ ವಿವಾದ ತಾರಕಕ್ಕೇರಿರುವ ನಡುವೆಯೇ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಸಮಿತಿ ವಿಸರ್ಜನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮಧ್ಯೆ ಪಠ್ಯ ಪುಸ್ತಕ ಪರಿಶೀಲನಾ ಸಮಿತಿಯಿಂದ ಮ್ಮತ್ತೊಂದು ಎಡವಟ್ಟಾಗಿರುವುದು ಬೆಳಕಿಗೆ ಬಂದಿದೆ.

3 ಹಾಗೂ 4ನೇ ತರಗತಿ ಪುಸ್ತಕಗಳಲ್ಲಿ ಒಂದೇ ಪದ್ಯವನ್ನು ಸೇರಿಸಿರುವುದು ಕಂಡುಬಂದಿದೆ. ಬಿ.ಎಂ.ಶರ್ಮಾರವರ ಬಾವಿಯಲ್ಲಿ ಚಂದ್ರ ಎಂಬ ಪದ್ಯವನ್ನು ಎರಡು ತರಗತಿಗಳಲ್ಲಿ ಸೇರಿಸುವ ಮೂಲಕ ಸಮಿತಿ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

ಬಾವಿಯಲ್ಲಿ ಚಂದ್ರ ಶೀರ್ಷಿಕೆಯ ಪದ್ಯವನ್ನು ಹಿಂದಿನ ಸಮಿತಿ 3ನೇ ತರಗತಿಯ ನಲಿ-ಕಲಿ ಕನ್ನಡ ಪಠ್ಯದಲ್ಲಿ ಸೇರಿಸಿತ್ತು. ರೋಹಿತ್ ಚಕ್ರತೀರ್ಥ ಸಮಿತಿಯ 3ನೇ ತರಗತಿಯ ನಲಿ-ಕಲಿ ಕನ್ನಡ ಪಠ್ಯದಲ್ಲಿಯೂ ಮುಂದುವರೆಸಿದೆ. ಅಲ್ಲದೇ 4ನೇ ತರಗತಿಯ ಸವಿ ಕನ್ನಡ ಪುಸ್ತಕದಲ್ಲಿಯೂ ಇದೇ ಪದ್ಯವನ್ನು ಸೇರಿಸಿದ್ದು ಇದೀಗ ಗೊಂದಲಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...