ಬೆಂಗಳೂರು: ಸಾಲು-ಸಾಲು ವಿವಾದಗಳು ಸೃಷ್ಟಿಯಾದರೂ ಶಿಕ್ಷಣ ಇಲಾಖೆ ಬಗ್ಗಿಲ್ಲ. ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಬಳಿಕ ದ್ವಿತೀಯ ಪಿಯು ಪಠ್ಯಪುಸ್ತಕಗಳನ್ನು ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಸಮಿತಿ ನೇತೃತ್ವದಲ್ಲಿ ರಾಜ್ಯ ಸರ್ಕಾರ ಸಮಿತಿಯನ್ನು ನೇಮಿಸಿದೆ.
ಚಕ್ರತೀರ್ಥ ನೇತೃತ್ವದ ಸಮಿತಿಯಿಂದ ದ್ವಿತೀಯ ಪಿಯು ಪಠ್ಯ ಪರಿಷ್ಕರಣೆ ಮಾಡಲಾಗುವುದು. ಅಧ್ಯಾಯ 4.2 ‘ಹೊಸ ಧರ್ಮಗಳ ಉದಯ’ ಪಠ್ಯಗಳ ಪರಿಷ್ಕರಣೆಯ ಹೊಣೆ ನೀಡಲಾಗಿದೆ. ಪಠ್ಯ ಪರಿಷ್ಕರಣೆ ಮಾಡಲು ರೋಹಿತ್ ಚಕ್ರತೀರ್ಥ ಸಮಿತಿಗೆ ಹೊಣೆ ನೀಡಲಾಗಿದೆ.
ಪಠ್ಯದಲ್ಲಿ ನಿರ್ದಿಷ್ಟ ಸಮುದಾಯಗಳ ಭಾವನೆಗೆ ಧಕ್ಕೆಯಾಗುವ ವಿಷಯ ತೆಗೆಯಲು ಸರ್ಕಾರ ನಿರ್ಧರಿಸಿದೆ. ಪಠ್ಯ ಪರಿಷ್ಕರಣೆ ಮಾಡುವಂತೆ ರೋಹಿತ್ ಚಕ್ರತೀರ್ಥ ಸಮಿತಿಗೆ ಜವಾಬ್ದಾರಿ ನೀಡಲಾಗಿದೆ. ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣೆಯಿಂದ ಹಿಂದೆ ಸರಿಯುವುದಿಲ್ಲ. ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣೆ ಶೀಘ್ರದಲ್ಲೇ ಆರಂಭವಾಗಲಿದೆ. ಪಠ್ಯ ಪರಿಷ್ಕರಣೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ ಎಂದು ನಿರ್ಗಮಿತ ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹೇಳಿದ್ದಾರೆ.