ಸಿಡ್ನಿ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮ ನಿವೃತ್ತಿ ವದಂತಿ ತಳ್ಳಿ ಹಾಕಿದ್ದಾರೆ. ಸದ್ಯಕ್ಕೆ ಕ್ರಿಕೆಟ್ ಬಿಟ್ಟು ಎಲ್ಲೂ ಹೋಗುತ್ತಿಲ್ಲ ಎಂದು ತಿಳಿಸಿದ್ದಾರೆ.
ಸದ್ಯಕ್ಕೆ ನಿವೃತ್ತಿ ಇಲ್ಲ, ರನ್ ಗಳಿಕೆ ಸಾಧ್ಯವಾಗದ ಕಾರಣದಿಂದಾಗಿ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದೇನೆ. ಕಷ್ಟಪಟ್ಟು ಕೆಲಸ ಮಾಡುತ್ತೇನೆ. ಮತ್ತೆ ತಂಡಕ್ಕೆ ವಾಪಸ್ ಆಗುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಿಂದ ಹೊರಗುಳಿದ ರೋಹಿತ್ ಶರ್ಮ ಅವರ ಟೆಸ್ಟ್ ವೃತ್ತಿ ಜೀವನದ ಅಂತ್ಯ ಸಮೀಪಿಸುತ್ತಿದೆ ಎಂದು ಹೇಳಲಾಗಿದೆ. ಆಸ್ಟ್ರೇಲಿಯಾ ಸರಣಿ ಮಧ್ಯದಲ್ಲೇ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಆರ್. ಅಶ್ವಿನ್ ವಿದಾಯ ಹೇಳಿದ್ದರು. ರೋಹಿತ್ ಶರ್ಮ ಇಂಗ್ಲೆಂಡ್ ವಿರುದ್ಧದ ತವರು ಸರಣಿ ಮತ್ತು ಚಾಂಪಿಯನ್ಸ್ ಟ್ರೋಫಿಯವರೆಗೆ ಭಾರತದ ಏಕದಿನ ತಂಡದ ನಾಯಕನಾಗಿ ಮುಂದುವರೆಯುವ ಸಾಧ್ಯತೆ ಇದೆ.
ಕಳೆದ ವರ್ಷ ಭಾರತ ತಂಡವನ್ನು ಎರಡನೇ ಬಾರಿಗೆ ಟಿ20 ವಿಶ್ವಕಪ್ ಪ್ರಶಸ್ತಿಗೆ ಮುನ್ನಡೆಸಿದ ರೋಹಿತ್ ಶರ್ಮ ಟಿ20 ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಆದರೆ ಟೆಸ್ಟ್ ನಾಯಕನಾಗಿ ಅವರು ಆಸ್ಟ್ರೇಲಿಯಾ ಸರಣಿಯಲ್ಲಿ ಯಶಸ್ವಿಯಾಗಿಲ್ಲ. ಆರಂಭಿಕ ಆಟಗಾರನ ಪಾತ್ರದಲ್ಲಿ, ಮಧ್ಯಮ ಕ್ರಮಾಂಕದಲ್ಲಿ ಲಯ ಕಂಡುಕೊಳ್ಳಲು ರೋಹಿತ್ ಶರ್ಮ ಹೆಣಗಾಡುತ್ತಿದ್ದಾರೆ. ಹೀಗಾಗಿ ಅವರನ್ನು ಕೈ ಬಿಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.
ಕೊನೆಯ ಟೆಸ್ಟ್ ಪಂದ್ಯದಿಂದ ರೋಹಿತ್ ಶರ್ಮ ಹೊರಗೊಳಿದಿದ್ದು, ಅವರ ಟೆಸ್ಟ್ ವೃತ್ತಿ ಜೀವನದ ಅಂತ್ಯ ಸಮೀಪಿಸುತ್ತಿದೆ ಎಂದು ಹೇಳಲಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು ಸದ್ಯಕ್ಕೆ ನಿವೃತ್ತಿ ಇಲ್ಲ, ಮತ್ತೆ ತಂಡಕ್ಕೆ ವಾಪಸ್ ಆಗುತ್ತೇನೆ ಎಂದು ಹೇಳಿದ್ದಾರೆ.