
ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ಅಫ್ಘಾನಿಸ್ತಾನ ನಡುವೆ ಅಂತಿಮ ಟಿ 20 ಪಂದ್ಯ ನಡೆಯಲಿದ್ದು, ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ ಇಂದು ಕ್ಲೀನ್ ಮಾಡುವ ಉತ್ಸಾಹದಲ್ಲಿದೆ.
ಭಾರತ ತಂಡದ ಆಲ್ರೌಂಡರ್ ಶಿವಂ ದುಬೆ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಸಿಡಿಸುವ ಮೂಲಕ ಹೊಸ ಭರವಸೆ ನೀಡಿದ್ದಾರೆ. ಟಿ20 ವಿಶ್ವಕಪ್ ಗೆ ಶಿವಂ ದುಬೆ ಸ್ಥಾನ ಪಡೆದುಕೊಳ್ಳುವುದು ಬಹುತೇಕ ಖಚಿತವಾಗಿದೆ.
ಸ್ಪಿನ್ ಮಾಂತ್ರಿಕ ರಶೀದ್ ಖಾನ್ ತಂಡದಲ್ಲಿರದೇ ಇರುವುದು ಆಫ್ಘಾನಿಸ್ತಾನ ತಂಡಕ್ಕೆ ದೊಡ್ಡ ಹೊಡೆತ ಕೊಟ್ಟಿದೆ. ಇಂದು ಕೊನೆಯ ಪಂದ್ಯದಲ್ಲಾದರೂ ರಶೀದ್ ಖಾನ್ ಅವರನ್ನು ಕಣಕ್ಕಿಳಿಸಲಿದ್ದಾರಾ ಕಾದು ನೋಡಬೇಕಾಗಿದೆ. ಬ್ಯಾಟಿಂಗ್ ಪಿಚ್ ಎಂದು ಹೆಸರುವಾಸಿಯಾಗಿರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರನ್ ಹೊಳೆ ಹರಿಯುವ ಸಾಧ್ಯತೆ ಹೆಚ್ಚಿದೆ.