ನವದೆಹಲಿ: ಧನ್ವಂತರಿ ಜಯಂತಿ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ವಿವಿಧ ಆರೋಗ್ಯ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
70 ವರ್ಷ ಮೇಲ್ಪಟ್ಟ ವೃದ್ಧರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ 5 ಲಕ್ಷ ರೂಪಾಯಿಯವರೆಗೆ ಉಚಿತ ಆರೋಗ್ಯ ವಿಮೆ, 12,850 ಕೋಟಿ ರೂಪಾಯಿ ಮೌಲ್ಯದ ಆರೋಗ್ಯ ಅಭಿವೃದ್ಧಿ ಯೋಜನೆಗಳು ಸೇರಿವೆ. ಪ್ರತ್ಯೇಕ ಕಾರ್ಯಕ್ರಮದಲ್ಲಿ ರೋಜ್ಗಾರ್ ಮೇಳ ಅಂಗವಾಗಿ 51,000 ಉದ್ಯೋಗ ಆಕಾಂಕ್ಷಿಗಳಿಗೆ ಮೋದಿ ನೇಮಕಾತಿ ಪತ್ರ ವಿತರಿಸಲಿದ್ದಾರೆ.
ಇಂದಿನಿಂದ 70 ವರ್ಷ ಮೇಲ್ಪಟ್ಟವರಿಗೂ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಲ್ಲಿ ಆರೋಗ್ಯ ಸೇವೆ ಕಲ್ಪಿಸಲಾಗುವುದು. 5 ಲಕ್ಷ ರೂಪಾಯಿ ಉಚಿತ ಆರೋಗ್ಯ ವಿಮೆ ಯೋಜನೆ ಇದಾಗಿದೆ. ಲಸಿಕಾಕರಣಗಳನ್ನು ಒಂದೇ ವೆಬ್ಸೈಟ್ ನಲ್ಲಿ ನೋಂದಣಿ ಮಾಡುವ ಯು ವಿನ್ ಪೋರ್ಟಲ್ ಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಲಿದ್ದಾರೆ.
ಕರ್ನಾಟಕದ ಒಂದು ಕ್ರಿಟಿಕಲ್ ಕೇರ್ ಬ್ಲಾಕ್ ಸೇರಿ ದೇಶದ 21 ಕ್ರಿಟಿಕಲ್ ಕೇರ್ ಬ್ಲಾಕ್ ಗಳಿಗೆ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ದೆಹಲಿಯಲ್ಲಿರುವ ದೇಶದ ಮೊದಲ ಅಖಿಲ ಭಾರತ ಆಯುರ್ವೇದ ಸಂಸ್ಥೆಯ ಎರಡನೆಯ ಹಂತವನ್ನು ಇಂದು ಉದ್ಘಾಟಿಸಲಾಗುವುದು.