alex Certify BIG UPDATE : ‘ದೆಹಲಿ ಏರ್ ಪೋರ್ಟ್’ ನಲ್ಲಿ ಮೇಲ್ಛಾವಣಿ ಕುಸಿತ ; ಮೃತನ ಕುಟುಂಬಕ್ಕೆ 20 ಲಕ್ಷ ಪರಿಹಾರ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ‘ದೆಹಲಿ ಏರ್ ಪೋರ್ಟ್’ ನಲ್ಲಿ ಮೇಲ್ಛಾವಣಿ ಕುಸಿತ ; ಮೃತನ ಕುಟುಂಬಕ್ಕೆ 20 ಲಕ್ಷ ಪರಿಹಾರ ಘೋಷಣೆ

ನವದೆಹಲಿ : ದೆಹಲಿ ಏರ್ ಪೋರ್ಟ್ ನಲ್ಲಿ ಮೇಲ್ಛಾವಣಿ ಕುಸಿದು ಓರ್ವ ಮೃತಪಟ್ಟು, ಐವರು ಗಾಯಗೊಂಡ ಘಟನೆ ಇಂದು ನಡೆದಿದೆ. ಇದೀಗ  ಮೃತನ  ಕುಟುಂಬಕ್ಕೆ 20 ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ 3 ಲಕ್ಷ ಪರಿಹಾರ ಘೋಷಿಸಲಾಗಿದೆ.

ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ದು ಅವರು ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ.

ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಮೇಲ್ಛಾವಣಿಯ ಒಂದು ಭಾಗವು ಶುಕ್ರವಾರ ಕಾರೊಂದರ ಮೇಲೆ ಬಿದಿದ್ದು, ಸ್ಥಳದಲ್ಲೇ ಚಾಲಕ ಮೃತಪಟ್ಟಿದ್ದಾರೆ.ವಿಮಾನ ನಿಲ್ದಾಣದಲ್ಲಿ ಕಾರುಗಳು ಮತ್ತು ಟ್ಯಾಕ್ಸಿಗಳ ಮೇಲೆ ಛಾವಣಿಯ ಭಾಗ ಬಿದ್ದಿದ್ದರಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇತರ ಐದು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಟರ್ಮಿನಲ್ 1 ರಿಂದ ಹೊರಡುವ ವಿಮಾನಗಳನ್ನು ಮಧ್ಯಾಹ್ನ 2 ಗಂಟೆಯವರೆಗೆ ರದ್ದುಪಡಿಸಲಾಗಿದೆ. ಮೇಲ್ಛಾವಣಿ ಕುಸಿದ ಕಾರಣ ಟರ್ಮಿನಲ್ 1 ರಿಂದ ಹೊರಡುವ ವಿಮಾನಗಳನ್ನು ರದ್ದುಪಡಿಸಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...