
ಕ್ರಿಕೆಟಿಗ ರಿಷಬ್ ಪಂತ್ ಅವರು ಭೀಕರ ಅಪಘಾತಕ್ಕೀಡಾಗಿದ್ದ ರಸ್ತೆಯಲ್ಲೇ ಮತ್ತೊಂದು ಎದೆನಡುಗಿಸುವ ರೀತಿಯ ಅಪಘಾತವಾಗಿದ್ದು ಒಬ್ಬರು ಮೃತಪಟ್ಟಿದ್ದಾರೆ.
ಉತ್ತರಾಖಂಡದ ರೂರ್ಕಿಯಲ್ಲಿ ಮೊನ್ನೆ ರಾತ್ರಿ ಮತ್ತೊಂದು ಕಾರು ಅಪಘಾತ ಸಂಭವಿಸಿದ್ದು, ದೆಹಲಿಯಿಂದ ಹರಿದ್ವಾರಕ್ಕೆ ತೆರಳುತ್ತಿದ್ದ ಎರ್ಟಿಗಾ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಏಳು ಯುವಕರು ಪವಿತ್ರ ಸ್ನಾನಕ್ಕಾಗಿ ಹರಿದ್ವಾರಕ್ಕೆ ತೆರಳುತ್ತಿದ್ದರು.
ದುರದೃಷ್ಟವಶಾತ್ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ವಾಹನಕ್ಕೆ ತೀವ್ರ ಹಾನಿಯಾಗಿದೆ. ಅಪಘಾತದ ವೀಡಿಯೊ ವೈರಲ್ ಆಗಿದ್ದು ಬೆಚ್ಚಿಬೀಳಿಸಿದೆ.
ಅಪಘಾತದ ಬಗ್ಗೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅವರು ಕೂಡಲೇ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಮೂಲಗಳ ಪ್ರಕಾರ ಗಾಯಾಳುಗಳಲ್ಲಿ ಒಬ್ಬರು ಈಗಾಗಲೇ ಸಾವನ್ನಪ್ಪಿದ್ದಾರೆ. ಉಳಿದವರನ್ನು ವೈದ್ಯಕೀಯ ಚಿಕಿತ್ಸೆ ಪಡೆದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಇತರ ಆಸ್ಪತ್ರೆಗೆ ಕಳುಹಿಸಲಾಗಿದೆ.