ಪ್ರವಾಸಿಗರಿಗೆ ಸಿಹಿ ಸುದ್ದಿ ಇಲ್ಲಿದೆ. ಜೋಗ ಜಲಪಾತ ಮತ್ತು ನಂದಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡಿದೆ. ಮುಂದಿನ ಹಂತದಲ್ಲಿ ಕೊಡಚಾದ್ರಿ ಬೆಟ್ಟ ಮತ್ತು ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ರೋಪ್ ವೇ ನಿರ್ಮಿಸಲು ತೀರ್ಮಾನಿಸಲಾಗಿದೆ.
ಕೇಂದ್ರ ಹೆದ್ದಾರಿ ಹಾಗೂ ಸಾರಿಗೆ ಸಚಿವಾಲಯಕ್ಕೆ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಪತ್ರ ಬರೆಯಲಾಗಿದೆ. ಕೊಡಚಾದ್ರಿಯಲ್ಲಿ ರೋಪ್ ವೇ ಯೋಜನೆ ಜಾರಿಗೆ ಕಾರ್ಯಾಸಾಧ್ಯತೆ ಅಧ್ಯಯನ ಪೂರ್ಣಗೊಳಿಸಲಾಗಿದ್ದು, ವಿಸ್ತೃತ ಯೋಜನಾ ವರದಿಗೆ ಸಿದ್ಧತೆ ಕೈಗೊಳ್ಳಲಾಗಿದೆ. ಅಂಜನಾದ್ರಿ ಬೆಟ್ಟದಲ್ಲಿ ಯೋಜನೆ ಅನುಷ್ಠಾನಕ್ಕೆ ಪೂರ್ವ ಕಾರ್ಯಾಸಾಧ್ಯತೆ ಅಧ್ಯಯನ ನಡೆಸಲಾಗಿದೆ.
ಪರ್ವತಮಾಲಾ ಯೋಜನೆಯಡಿ ರಾಜ್ಯದ ವಿವಿಧೆಡೆ ರೋಪ್ ವೇ ನಿರ್ಮಾಣಕ್ಕೆ ಚಿಂತನೆ ನಡೆದಿದೆ. ನಂದಿ ಬೆಟ್ಟದಲ್ಲಿ ರೋಪ್ ವೇ ನಿರ್ಮಿಸಲು ಡೈನಾಮಿಕ್ಸ್ ರೋಪ್ ವೇ ಲಿಮಿಟೆಡ್ ಜೊತೆಗೆ ಪ್ರವಾಸೋದ್ಯಮ ಇಲಾಖೆ ಒಪ್ಪಂದ ಮಾಡಿಕೊಂಡಿದೆ. ಜೋಗ ಜಲಪಾತದಲ್ಲಿ ಕೂಡ ರೋಪ್ ವೇ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಸ್ಥಳೀಯರ ವಿರೋಧ ಕಾರಣಕ್ಕೆ ಯೋಜನೆ ಕೈಬಿಡಲಾಗಿದೆ.