ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತನಿಖೆ ಮುಂದುವರೆಸಿದ್ದು, ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಬಂಧಿಸಿದ್ದಾರೆ.
ಐಎಂಎ ಮಾಲೀಕ ಮನ್ಸೂರ್ ಖಾನ್ ಜೊತೆಗೆ ರೋಷನ್ ಬೇಗ್ ವ್ಯವಹಾರ ಹೊಂದಿದ್ದರು ಎನ್ನಲಾಗಿದೆ. ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದು 7 ತಾಸು ವಿಚಾರಣೆ ನಡೆಸಿದ ಸಿಬಿಐ ಬಂಧಿಸಿದೆ. ಬಳಿಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ರೋಷನ್ ಬೇಗ್ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ರೋಷನ್ ಬೇಗ್ 400 ಕೋಟಿ ರೂಪಾಯಿ ಪಡೆದುಕೊಂಡಿದ್ದರು ಎಂದು ಮನ್ಸೂರ್ ಖಾನ್ ಆರೋಪಿಸಿದ್ದು ಈ ಬಗ್ಗೆ ಸಿಬಿಐ ತನಿಖೆ ಕೈಗೊಂಡಿದೆ ಎನ್ನಲಾಗಿದೆ.