alex Certify BIG NEWS: ಬಂಧನದ ಬೆನ್ನಲ್ಲೇ ಜೈಲು ಸೇರಿದ ಮಾಜಿ ಸಚಿವ ರೋಷನ್ ಬೇಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಂಧನದ ಬೆನ್ನಲ್ಲೇ ಜೈಲು ಸೇರಿದ ಮಾಜಿ ಸಚಿವ ರೋಷನ್ ಬೇಗ್

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತನಿಖೆ ಮುಂದುವರೆಸಿದ್ದು, ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಬಂಧಿಸಿದ್ದಾರೆ.

ಐಎಂಎ ಮಾಲೀಕ ಮನ್ಸೂರ್ ಖಾನ್ ಜೊತೆಗೆ ರೋಷನ್ ಬೇಗ್ ವ್ಯವಹಾರ ಹೊಂದಿದ್ದರು ಎನ್ನಲಾಗಿದೆ. ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದು 7 ತಾಸು ವಿಚಾರಣೆ ನಡೆಸಿದ ಸಿಬಿಐ ಬಂಧಿಸಿದೆ. ಬಳಿಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ರೋಷನ್ ಬೇಗ್ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ರೋಷನ್ ಬೇಗ್ 400 ಕೋಟಿ ರೂಪಾಯಿ ಪಡೆದುಕೊಂಡಿದ್ದರು ಎಂದು ಮನ್ಸೂರ್ ಖಾನ್ ಆರೋಪಿಸಿದ್ದು ಈ ಬಗ್ಗೆ ಸಿಬಿಐ ತನಿಖೆ ಕೈಗೊಂಡಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...