
ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿತರಾಗಿರುವ ರೋಷನ್ ಬೇಗ್ ಅವರು ಪರಪ್ಪನ ಅಗ್ರಹಾರ ಜೈಲು ಸೇರಿಕೊಂಡಿದ್ದಾರೆ.
ಅವರನ್ನು ಸಿಬಿಐ ವಿಚಾರಣೆಗೆ ಇವತ್ತು ಕಸ್ಟಡಿಗೆ ಪಡೆಯಬೇಕಿತ್ತು. ರೋಷನ್ ಬೇಗ್ ಅವರನ್ನು ಸಿಬಿಐ ಕಸ್ಟಡಿಗೆ ನೀಡುವಂತೆ ಕೋರ್ಟ್ ಸೂಚನೆ ನೀಡಿತ್ತು. ಆದರೆ, ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಜೈಲಿನಿಂದ ಜಯದೇವ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಸಿಬಿಐ ವಿಚಾರಣೆ ನಡೆಸಲಿದೆ ಎಂದು ಹೇಳಲಾಗಿದೆ.