alex Certify BIG BREAKING: ಶಾಸಕ ಜಮೀರ್ ಗೆ ಐಟಿ ಶಾಕ್ ಬೆನ್ನಲ್ಲೇ ಮಾಜಿ ಸಚಿವ ರೋಷನ್ ಬೇಗ್ ಗೆ ಇಡಿ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಶಾಸಕ ಜಮೀರ್ ಗೆ ಐಟಿ ಶಾಕ್ ಬೆನ್ನಲ್ಲೇ ಮಾಜಿ ಸಚಿವ ರೋಷನ್ ಬೇಗ್ ಗೆ ಇಡಿ ಬಿಗ್ ಶಾಕ್

ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಶಿವಾಜಿನಗರದ ರೋಷನ್ ಬೇಗ್ ನಿವಾಸ, ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಎಂಎ ಅವ್ಯವಹಾರ, ವಂಚನೆ ಪ್ರಕರಣ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಸಿ.ಆರ್.ಪಿ.ಎಫ್. ಭದ್ರತೆಯೊಂದಿಗೆ ಇಡಿ ದಾಳಿ ನಡೆಸಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬಿಜೆಪಿ ಮುಖಂಡ ರೋಷನ್ ಬೇಗ್ ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಅವರ ಮನೆ, ಕಚೇರಿ ಸೇರಿ 6 ಕಡೆಗಳಲ್ಲಿ ದಾಳಿ ನಡೆದಿದೆ. ದೆಹಲಿಯ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆದಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...