
ಬೆಂಗಳೂರು: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದಿದ್ದಾರೆ.
ಶನಿವಾರ ಸಂಜೆ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸಿಬಿಐ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲಾಗಿದೆ.
ಪ್ರತಿ ಎರಡನೇ ಮತ್ತು ನಾಲ್ಕನೇ ಸೋಮವಾರ ಸಿಬಿಐ ಮುಂದೆ ಹಾಜರಾಗಬೇಕು. ಸಿಬಿಐ ನೋಟಿಸ್ ನೀಡಿದಾಗ ವಿಚಾರಣೆಗೆ ಹಾಜರಾಗಬೇಕು. ತನಿಖೆಗೆ ಸಹಕರಿಸಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಪಾಸ್ಪೋರ್ಟ್ ಸರೆಂಡರ್ ಮಾಡಬೇಕು. ವಿಳಾಸ ಬದಲಾವಣೆ ಮಾಡಿದರೆ ಅಧಿಕಾರಿಗಳಿಗೆ ತಿಳಿಸಬೇಕು. ತನಿಖೆಗೆ ಪೂರ್ಣ ಸಹಕಾರ ನೀಡಬೇಕೆಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಲಾಗಿದೆ.