alex Certify ಹಾಸನದಲ್ಲಿ ಪುಡಿ ರೌಡಿಗಳ ದಾಂಧಲೆ: ಇಬ್ಬರ ಹೆಡೆಮುರಿಕಟ್ಟಿದ ಖಾಕಿ, ಉಳಿದವರಿಗಾಗಿ ಶೋಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸನದಲ್ಲಿ ಪುಡಿ ರೌಡಿಗಳ ದಾಂಧಲೆ: ಇಬ್ಬರ ಹೆಡೆಮುರಿಕಟ್ಟಿದ ಖಾಕಿ, ಉಳಿದವರಿಗಾಗಿ ಶೋಧ

ಹಾಸನ: ನಗರದಲ್ಲಿ ಪುಡಿ ರೌಡಿಗಳು ಮಚ್ಚು ಹಿಡಿದು ದಾಂಧಲೆ ಎಬ್ಬಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪುಡಿ ರೌಡಿಗಳಿಗೆ ಚಾರ್ಜ್ ಮಾಡಿದ್ದಾರೆ.

ಕುವೆಂಪು ನಗರದ ಬಡಾವಣೆಯಲ್ಲಿ ಪುಡಿ ರೌಡಿಗಳು ಪುಂಡಾಟ ಮೆರೆದಿರುವ ಘಟನೆ ನಡೆದಿದೆ. ಬಾರ್ ಆಂಡ್ ರೆಸ್ಟೋರೆಂಟ್ ಬಳಿ ಏನೂ ಕಾರಣವಿಲ್ಲದೆ ಯುವಕರೊಂದಿಗೆ ಕ್ಯಾತೆ ತೆಗೆದು ಓರ್ವ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪುಂಡಾಟದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸ್ ಠಾಣೆ ಕೂಗಳತೆ ದೂರದಲ್ಲೇ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಾಕ್ಕಾಗಮಿಸಿದ ಪೊಲೀಸರು ಬಾಲಬಿಚ್ಚಿದ ಇಬ್ಬರನ್ನು ಬಂಧಿಸಿ, ಸರಿಯಾಗಿ ಗೂಸಾ ಕೊಟ್ಟಿದ್ದಾರೆ. ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ನಗರದಲ್ಲಿ ಪುಡಿ ರೌಡಿಗಳ ಕಾಟ ಹೆಚ್ಚಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...