ಬೆಂಗಳೂರು : ವಾಹನ ಅಡ್ಡಗಟ್ಟಿ ಕಿರಿಕ್ ಮಾಡಿದ್ರೆ, ಅಂತಹವರ ವಿರುದ್ಧ ರೌಡಿಶೀಟ್ ಓಪನ್ ಮಾಡಲಾಗುತ್ತದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಹೌದು ಕ್ಷುಲ್ಲಕ ಕಾರಣಗಳಿಗೆ ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಕಿರಿಕ್ ಮಾಡಿ ಜನರಿಗೆ ಬೆದರಿಸಿ ಸುಲಿಗೆ ಮಾಡುವವರ ಕಿಡಿಗೇಡಿಗಳ ವಿರುದ್ಧ ರೌಡಿಪಟ್ಟಿತೆರೆಯುವಂತೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದ ಹಲವು ಕಡೆ ರಸ್ತೆಯಲ್ಲಿ ಪುಂಡಾಟಿಕೆ ನಡೆಸಿ, ಜನರಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿರುವ ಹೆಚ್ಚಾಗುತ್ತಿರುವ ಹಿನ್ನೆಲೆ ಈ ಕ್ರಮಕ್ಕೆ ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ನೀಡಿದ್ದಾರೆ.
ರಾಜಧಾನಿ ಬೆಂಗಳೂರು, ಬೆಂಗಳೂರಿನ ಹೊರವಲಯಗಳ ರಸ್ತೆಯಲ್ಲಿ ಪುಂಡರು, ಕಿಡಿಗೇಡಿಗಳು ವಾಹನಗಳನ್ನು ಅಡ್ಡಗಟ್ಟಿ ಕಿರಿಕ್ ಮಾಡುವುದು, ಕಲ್ಲುಗಳನ್ನು ಎತ್ತಿಹಾಕಿ ವಾಹನಗಳನ್ನು ಜಖಂಗೊಳಿಸುವುದು ಇಂತಹ ನೂರಾರು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿತ್ತಿತ್ತು. ಈ ಹಿನ್ನಲೆಯಲ್ಲಿ ಪುಡಿರೌಡಿಗಳಿಗೆ ಕಡಿವಾಣ ಹಾಕಲು ಬೆಂಗಳೂರು ನಗರ ಪೊಲೀಸರು ಸಜ್ಜಾಗಿದ್ದಾರೆ. ಇನ್ಮುಂದೆ ವಾಹನ ಅಡ್ಡಗಟ್ಟಿ ಗಲಾಟೆ ಮಾಡುವವರ ವಿರುದ್ಧ ರೌಡಿಶೀಟರ್ ಓಪನ್ ಆಗಲಿದೆ. ಸರಣಿ ರೋಡ್ ಕೇಸ್ ಗಳು ದಾಖಲಾಗಲಿವೆ.