ಮಂಡ್ಯ : ಹಾಡಹಗಲೇ ರೌಡಿ ಶೀಟರ್ ಓರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ರೌಡಿಶೀಟರ್ ಸುಧೀರ್ ಎಂಬಾತನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲಿಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹಾಡಹಗಲೇ ನಡೆದ ಭೀಕರ ಹತ್ಯೆಗೆ ಜನರು ಬೆಚ್ಚಿ ಬಿದ್ದಿದ್ದಾರೆ. ಸದ್ಯ ಪರಿಶೀಲನೆ ನಡೆಸಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.