
ಕೋಲಾರ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಮಾರಿಕುಪ್ಪಂ ಸಮೀಪ ಘಟನೆ ನಡೆದಿದೆ.
ಶಿವಕುಮಾರ್ ಅಲಿಯಾಸ್ ತೇನ್ ಕೊಲೆಯಾದ ರೌಡಿಶೀಟರ್ ಎಂದು ಗುರುತಿಸಲಾಗಿದೆ. ಮಾರಿಕುಪ್ಪಂ ರಿವೀಟರ್ಸ್ ಲೈನ್ ನಿವಾಸಿಯಾಗಿರುವ ಶಿವಕುಮಾರ್ ನನ್ನು ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಪ್ರಿಯತಮೆಯ ಜೊತೆಗೆ ಕಾಮಸಮುದ್ರಕ್ಕೆ ಹೋಗುವಾಗ ಅಡ್ಡಗಟ್ಟಿ ಕೊಲೆ ಮಾಡಲಾಗಿದೆ.
ಎರಡು ಬೈಕ್ ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಕೃತ್ಯವೆಸಗಿದ್ದಾರೆ. ರೌಡಿಶೀಟರ್ ಜೊತೆಗಿದ್ದ ಪ್ರಿಯತಮೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಲೆಯಾದ ಶಿವಕುಮಾರ್ ಆಂಡರ್ಸನ್ ಪೇಟೆ ಠಾಣೆಯ ರೌಡಿಶೀಟರ್ ಆಗಿದ್ದಾನೆ. ಶಿವಕುಮಾರ್ ವಿರುದ್ಧ 3 ಕೊಲೆ ಯತ್ನ, ಹಲ್ಲೆ ಪ್ರಕರಣಗಳು ಇವೆ.
ಕೊಲೆಗೈದು ಪರಾರಿಯಾಗಿರುವ ಹಂತಕರಿಗೆ ಪೊಲೀಸರು ಬಲೆ ಬೀಸಿದ್ದಾರೆ. ಅಂಡರ್ಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.