alex Certify ಸಿನಿಮೀಯ ಶೈಲಿಯಲ್ಲಿ ದಾರಿಯಲ್ಲಿ ಸಿಕ್ಕ ಸಿಕ್ಕವರ ಮೇಲೆ ಲಾಂಗ್ ಬೀಸಿದ್ದ ರೌಡಿಶೀಟರ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿನಿಮೀಯ ಶೈಲಿಯಲ್ಲಿ ದಾರಿಯಲ್ಲಿ ಸಿಕ್ಕ ಸಿಕ್ಕವರ ಮೇಲೆ ಲಾಂಗ್ ಬೀಸಿದ್ದ ರೌಡಿಶೀಟರ್ ಅರೆಸ್ಟ್

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ದಾರಿಯಲ್ಲಿ ಸಿಕ್ಕ ಸಿಕ್ಕವರ ಮೇಲೆ ಲಾಂಗ್ ಬೀಸಿದ್ದ ರೌಡಿಶೀಟರ್ ನನ್ನು ಬಂಧಿಸಲಾಗಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಕಳವಾರ ಬಳಿ ರೌಡಿಶೀಟರ್ ಅರ್ಜುನ್ ನನ್ನು ಬಂಧಿಸಲಾಗಿದೆ. ನಿನ್ನೆ ರಾತ್ರಿ ಸಿನಿಮಾ ಶೈಲಿಯಲ್ಲಿ ಸಿಕ್ಕ ಸಿಕ್ಕವರ ಮೇಲೆ ರೌಡಿ ಅರ್ಜುನ್ ಲಾಂಗ್ ಬೀಸಿದ್ದ. ಬೈಕ್ ನಲ್ಲಿ ಹೋಗುವಾಗ ಮೂವರು ಮಹಿಳೆಯರ ಮತ್ತು ನಾಲ್ವರು ಪುರುಷರ ಮೇಲೆ ಅರ್ಜುನ್ ಲಾಂಗ್ ಬೀಸಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಭಾನುವಾರ ರಾತ್ರಿ ಹೆಲ್ಮೆಟ್ ಧರಿಸಿಕೊಂಡು ಬೈಕ್ ನಲ್ಲಿ ಬಂದಿದ್ದ ರೌಡಿಶೀಟರ್ ಅರ್ಜುನ್ ಏಕಾಏಕಿ ಲಾಂಗ್ ಬೀಸಿದ್ದ. ಚಿಕ್ಕಬಳ್ಳಾಪುರದ ಬಿಬಿ ರಸ್ತೆ, ಬಜಾರ್ ರಸ್ತೆಯಲ್ಲಿ ನಡೆದುಕೊಂಡು ಹೋಗುವವರ ಮೇಲೆ ಲಾಂಗ್ ಬೀಸಿದ್ದರಿಂದ 7 ಮಂದಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಚಿಕ್ಕಬಳ್ಳಾಪುರದ ಖಾಸಗಿ ಆಸ್ಪತ್ರೆಗಳು ಮತ್ತು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...