
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ರಸ್ತೆಯಲ್ಲೇ ತಲ್ವಾರ್ ಹಿಡಿದು ರೌಡಿಶೀಟರ್ ಗಲಾಟೆ ಗಲಾಟೆ ನಡೆಸಿದ್ದಾನೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ರೌಡಿಶೀಟರ್ ಸಮೀರ್ ಗಲಾಟೆ ಮಾಡಿದವ. ಕುಡಿದ ಮತ್ತಿನಲ್ಲಿ ಜೀವಿತ್ ಮತ್ತು ಅಪ್ರೋಜ್ ಎಂಬುವರ ಮೇಲೆ ಸಮೀರ್ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ತೀರ್ಥಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.