
ಬೆಂಗಳೂರು: ನಮ್ಮ ಪಕ್ಷ ಯಾವುದೇ ರೌಡಿಶೀಟರ್ ಗಳಿಗೆ ಮನ್ನಣೆ ನೀಡುವುದಿಲ್ಲ. ಸೈಲೆಂಟ್ ಸುನಿಲ ಸೇರಿ ಯಾವುದೇ ರೌಡಿಗಳನ್ನು ಸೇರಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಈಗಾಗಲೇ ತಿಳಿಸಿರುವಂತೆ ಸೈಲೆಂಟ್ ಸುನಿಲ್ ನನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ರೌಡಿಶೀಟರ್ ಗಳನ್ನು ಸಹಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.