ಬೆಂಗಳೂರು: ಆಂಧ್ರಪ್ರದೇಶದ ರೌಡಿಶೀಟರ್ ಮತ್ತು ಆತನ ಕಾರ್ ಚಾಲಕನ ಮೇಲೆ ನಗರದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ.
ಮದನಪಲ್ಲಿ ಠಾಣೆ ರೌಡಿಶೀಟರ್ ಶಿವಾರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಎರಡು ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಶಿವಾರೆಡ್ಡಿ ಭಾಗಿಯಾಗಿದ್ದ ಆರೋಪ ಕೇಳಿ ಬಂದಿದೆ. ಕೆಆರ್ ಪುರಂ ಸಮೀಪದ ಹ್ಯಾಪಿ ಗಾರ್ಡನ್ ನಲ್ಲಿ ಘಟನೆ ನಡೆದಿದೆ.
ಕೆಆರ್ ಪುರಂ ಬಳಿ ಶಿವಾರೆಡ್ಡಿ ಅಪಾರ್ಟ್ಮೆಂಟ್ ನಿರ್ಮಿಸುತ್ತಿದ್ದ. ಗುರುವಾ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾಮಗಾರಿ ವೀಕ್ಷಣೆಗೆ ಬಂದಿದ್ದ ವೇಳೆಯಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ಚಾಲಕ ಅಶೋಕ ರೆಡ್ಡಿ ಜೊತೆಗೆ ಬಂದಿದ್ದ ಶಿವಾರೆಡ್ಡಿ ವೇಳೆ ಅವರ ಮೇಲೆ ಎರಡು ಬೈಕ್ ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳ ಗುಂಪಿನಿಂದ ಫೈರಿಂಗ್ ಮಾಡಲಾಗಿದೆ.
ಆಂಧ್ರಪ್ರದೇಶ ಮೂಲದ ನಾಲ್ವರು ಶಿವಾರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಶಿವಾರೆಡ್ಡಿ ಮತ್ತು ಚಾಲಕ ಅಶೋಕ್ ರೆಡ್ಡಿಗೆ ಗುಂಡೇಟಿನ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಶಿವಾರೆಡ್ಡಿ ಮತ್ತು ಅಶೋಕ ರೆಡ್ಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಂಡು ಹಾರಿಸಿ ಪರಾರಿಯಾದವರ ಪತ್ತೆಗಾಗಿ ಮೂರು ವಿಶೇಷ ತಂಡ ರಚಿಸಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.