
ಬೆಂಗಳೂರು: ಕಾಲಿಗೆ ಗುಂಡು ಹಾರಿಸಿ ರೌಡಿಶೀಟರ್ ವಿಜಯ್ ಕುಮಾರ್ ಅಲಿಯಾಸ್ ಗೊಣ್ಣೆ ವಿಜಯ್ ನನ್ನು ಬಂಧಿಸಲಾಗಿದೆ.
ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ವಿಜಯಕುಮಾರ್ 18 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಖಚಿತ ಮಾಹಿತಿ ಮೇರೆಗೆ ಆತನ ಬಂಧನಕ್ಕೆ ಪೊಲೀಸರು ವೀರಭದ್ರ ನಗರಕ್ಕೆ ತೆರಳಿದ್ದರು. ಈ ವೇಳೆ ಗಿರಿನಗರ ಠಾಣೆ ಪೊಲೀಸ್ ಕಾನ್ ಸ್ಟೇಬಲ್ ಮಧುಸುದನ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲೆತ್ನಿಸಿದಾಗ ಫೈರಿಂಗ್ ಮಾಡಲಾಗಿದೆ. ಎಡಗಾಲಿಗೆ ಗುಂಡೇಟು ಬಿದ್ದಿರುವ ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.