
ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ರಾಗಿಹಳ್ಳಿ ಸಮೀಪ ನಟೋರಿಯಸ್ ರೌಡಿಶೀಟರ್ ವೆಂಕಟರಾಜು ಅಲಿಯಾಸ್ ತುಕಡಿ ಮೇಲೆ ಜಿಗಣಿ ಇನ್ ಸ್ಪೆಕ್ಟರ್ ಮಂಜುನಾಥ್ ಫೈರಿಂಗ್ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ವೇಳೆ ಆತ್ಮರಕ್ಷಣೆಗಾಗಿ ಫೈರಿಂಗ್ ಮಾಡಲಾಗಿದೆ. ಶರಣಾಗುವಂತೆ ಆತನಿಗೆ ವಾರ್ನಿಂಗ್ ಮಾಡಲಾಗಿದ್ದರೂ, ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿದ್ದಾರೆ.
ಎರಡು ತಿಂಗಳ ಹಿಂದೆ ರೌಡಿಶೀಟರ್ ವೆಂಕಟರಾಜು ಶೆಟ್ಟಿಹಳ್ಳಿ ಸಮೀಪ ಕೊಲೆ ಯತ್ನ ನಡೆಸಿದ್ದ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೊಲೆ, ಕೊಲೆ ಯತ್ನ ಪ್ರಕರಣಗಳಲ್ಲಿ ಬೇಕಾಗಿದ್ದ ವೆಂಕಟರಾಜು ಹತ್ತಕ್ಕೂ ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದು, ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದ.