
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ರೌಡಿಶೀಟರ್ ಮೇಲೆ ಫೈರಿಂಗ್ ಮಾಡಲಾಗಿದೆ. ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ರೌಡಿಶೀಟರ್ ರವಿ ಅಲಿಯಾಸ್ ಗುಂಡ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆತನ ಮೇಲೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಶಿವಮೊಗ್ಗದಲ್ಲಿ ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಹೇಳಿದ್ದಾರೆ.
ರೌಡಿಶೀಟರ್ ಗುಂಡನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಭದ್ರಾವತಿಯ ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫೈರಿಂಗ್ ಮಾಡಲಾಗಿದೆ. ಕೊಲೆ ಯತ್ನ ಪ್ರಕರಣದಲ್ಲಿ ರವಿಯನ್ನು ಬಂಧಿಸಲು ತೆರಳಿದ್ದಾಗ ಪೊಲೀಸ್ ಸಿಬ್ಬಂದಿ ಆದರ್ಶ್ ಅವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಪಿಎಸ್ಐ ಕೃಷ್ಣ ಅವರು ರವಿ ಕಾಲಿಗೆ ಗುಂಡು ಹಾರಿಸಿದ್ದಾರೆ. ರವಿಯ ವಿರುದ್ಧ ಕೊಲೆ ಯತ್ನ, ಕಳ್ಳತನ ಸೇರಿದಂತೆ ನಾಲ್ಕು ಪ್ರಕರಣಗಳು ಇವೆ ಎಂದು ಎಸ್ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.