
ಮಂಡ್ಯ: ಮಂಡ್ಯದಲ್ಲಿ ಪುಡಿ ರೌಡಿಗಳ ಅಟ್ಟಹಾಸ ಹೆಚ್ಚಾದ ಹಿನ್ನೆಲೆಯಲ್ಲಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಸುಭಾಷ್ ಅಲಿಯಾಸ ಸುಬ್ಬು ಮೇಲೆ ಫೈರಿಂಗ್ ಮಾಡಲಾಗಿದೆ. ಮಂಡ್ಯ ತಾಲೂಕಿನ ಬಿ. ಹೊಸೂರು ಸಮೀಪ ಗುಂಡಿನ ದಾಳಿ ನಡೆಸಲಾಗಿದೆ. ಕಾಲಿಗೆ ಗುಂಡು ಹೊಡೆದು ಆರೋಪಿ ಸುಭಾಷ್ ನನ್ನು ಬಂಧಿಸಲಾಗಿದೆ. ಐದಕ್ಕೂ ಅಧಿಕ ಪ್ರಕರಣಗಳಲ್ಲಿ ಆರೋಪಿ ಭಾಗಿಯಾಗಿದ್ದ.
ಬಿ. ಹೊಸೂರು ಸಮೀಪ ಆತ ತಲೆಮರೆಸಿಕೊಂಡಿರುವ ಮಾಹಿತಿ ಗೊತ್ತಾಗಿ ಬಂಧನಕ್ಕೆ ಪೊಲೀಸರು ತೆರಳಿದ್ದಾರೆ. ಈ ವೇಳೆ ಪೊಲೀಸರ ಮೇಲೆಯೇ ಆರೋಪಿ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಮಂಡ್ಯ ಪೂರ್ವ ಠಾಣೆಯ ಪಿಎಸ್ಐ ಶೇಷಾದ್ರಿ ಕುಮಾರ್ ಫೈರಿಂಗ್ ಮಾಡಿದ್ದಾರೆ. ಆತ್ಮ ರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಲಾಗಿದೆ. ಗಾಯಾಳು ಆರೋಪಿಯನ್ನು ಬಂಧಿಸಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.