ಬೆಂಗಳೂರು: ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗುಗುತ್ತಿದ್ದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಯಸಂದ್ರದಲ್ಲಿ ನಡೆದಿದೆ.
ರೌಡಿಶೀಟರ್ ಬೆಸ್ತಮಾನಹಳ್ಳಿ ಲೋಕೇಶ್ ಅಲಿಯಾಸ್ ಲೋಕಿ ಕಾಲಿಗೆ ಫೈರಿಂಗ್ ಮಾಡಲಾಗಿದೆ. ರೌಡಿಶೀಟರ್ ಮನೋಜ್ ಮೇಲೆ ಲೋಕಿ ಗ್ಯಾಂಗ್ ದಾಳಿ ನಡೆಸಿತ್ತು. ತಲೆಮರೆಸಿಕೊಂಡಿದ್ದ ಲೋಕಿ ಮತ್ತು ಸಹಚರರ ಬಂಧನಕ್ಕೆ ಆನೇಕಲ್ ತಾಲೂಕಿನ ಮಾಯಸಂದ್ರಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಲೋಕಿ ಹಲ್ಲೆ ಮಾಡಿ ಪರಾರಿಯಾಗಲು ಮುಂದಾಗಿದ್ದಾನೆ. ಆತ್ಮರಕ್ಷಣೆಗಾಗಿ ಜಿಗಣಿ ಇನ್ಸ್ಪೆಕ್ಟರ್ ಮಂಜುನಾಥ್ ಫೈರಿಂಗ್ ಮಾಡಿದ್ದಾರೆ. ಗಾಯಗೊಂಡ ರೌಡಿಶೀಟರ್ ಲೋಕಿಯನ್ನ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ.