alex Certify ಪೊಲೀಸರ ಮೇಲೆಯೇ ಹಲ್ಲೆ: ರೌಡಿಶೀಟರ್ ಕಾಲಿಗೆ ಗುಂಡೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರ ಮೇಲೆಯೇ ಹಲ್ಲೆ: ರೌಡಿಶೀಟರ್ ಕಾಲಿಗೆ ಗುಂಡೇಟು

ಶಿವಮೊಗ್ಗ: ಕೊಲೆ ಯತ್ನ ಆರೋಪಿ ರೌಡಿಶೀಟರ್ ಸೈಫುಲ್ಲಾ ಖಾನ್ ಮೇಲೆ ಶಿವಮೊಗ್ಗದ ಜಯನಗರ ಠಾಣೆ ಪಿಎಸ್ಐ ನವೀನ್ ಫೈರಿಂಗ್ ಮಾಡಿದ್ದಾರೆ.

ಶಿವಮೊಗ್ಗ ತಾಲೂಕಿನ ದೊಡ್ಡದಾನವಂದಿ ಅರಣ್ಯದ ಬಳಿ ಘಟನೆ ನಡೆದಿದೆ. ಪ್ರಕರಣ ಸಂಬಂಧ ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆಯೇ ಸೈಫುಲ್ಲಾ ಹಲ್ಲೆ ನಡೆಸಿದ್ದಾನೆ. ಕಾನ್ಸ್ಟೇಬಲ್ ನಾಗರಾಜ್ ಮೇಲೆ ಸೈಫುಲ್ಲಾ ಖಾನ್ ಹಲ್ಲೆ ಮಾಡಿದ್ದು, ಈ ವೇಳೆ ಆತ್ಮ ರಕ್ಷಣೆಗಾಗಿ ಪಿಎಸ್ಐ ನವೀನ್ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಸೈಫುಲ್ಲಾನನ್ನು ವಶಕ್ಕೆ ಪಡೆದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಪೊಲೀಸರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ದೊಡ್ಡಪೇಟೆ ಠಾಣೆಯೊಂದರಲ್ಲಿ ಸೈಫುಲ್ಲಾ ವಿರುದ್ಧ 16 ಕೇಸ್ ದಾಖಲಾಗಿವೆ. ತುಂಗಾನಗರ, ಜಯನಗರ ಠಾಣೆಯಲ್ಲಿಯೂ ಕೇಸ್ ಇತ್ತು. ಮಾರ್ಕೆಟ್ ಪೌಜನ್ ಗ್ಯಾಂಗ್ ಸದಸ್ಯನಾಗಿರುವ ಸೈಫುಲ್ಲಾನನ್ನು ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಲು ತೆರಳಿದ್ದ ವೇಳೆ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...