ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ ಮಾಡಿದ ಘಟನೆ ಕಲಬುರಗಿ ನಗರ ಹೊರವಲಯದ ಮಾಲಗತ್ತಿ ಕ್ರಾಸ್ ಬಳಿ ನಡೆದಿದೆ.
ಮೋಸ್ಟ್ ವಾಂಟೆಡ್ ರೌಡಿಶೀಟರ್ ಕಲೀಲ್ ಅಹಮದ್(38) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ತಡರಾತ್ರಿ ಕಲೀಲ್ ನನ್ನು ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ನಿವೇಶನ ವಿಚಾರಕ್ಕೆ ಗಲಾಟೆಯಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.