ಬೆಂಗಳೂರು: ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಜಯನಗರ ಠಾಣೆ ವ್ಯಾಪ್ತಿಯ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನು ತಮಿಳುನಾಡಿನ ಕೃಷ್ಣಗಿರಿ ಸಮೀಪ ಹತ್ಯೆ ಮಾಡಲಾಗಿದೆ.
ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಹಲವು ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದ. ಕೊಲೆ, ಸುಲಿಗೆ, ದರೋಡೆ, ಬೆದರಿಕೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಇತ್ತೀಚೆಗೆ ತಮಿಳುನಾಡಿಗೆ ವಾಸ್ತವ್ಯ ಬದಲಾಯಿಸಿದ್ದ. ತಿಲಕ್ ನಗರದ ಜಲ್ಲಿ ವೆಂಕಟೇಶ್ ಕೊಲೆ ಆರೋಪಿಯಾಗಿದ್ದ ಬಾಬು ಮೃತ ರೌಡಿಶೀಟರ್ ಅರಸಯ್ಯ ಗ್ಯಾಂಗ್ ನಲ್ಲಿ ಗುರುತಿಸಿಕೊಂಡಿದ್ದ. ಕೊತ್ತನೂರು ದಿಣ್ಣೆ ಬಳಿ ಹಾಲೋಬ್ರಿಕ್ಸ್ ವ್ಯವಹಾರ ನಡೆಸುತ್ತಿದ್ದ. ಬೆಂಗಳೂರಿನ ಕೆಲವು ರಾಜಕಾರಣಿಗಳನ್ನು ಎದುರು ಹಾಕಿಕೊಂಡಿದ್ದ.
ಕೃಷ್ಣಗಿರಿ ತಾಲೂಕಿನ ಡೆಂಕಣಕೋಟೆ ಅರಣ್ಯ ಪ್ರದೇಶದಲ್ಲಿ ಬಾಬು ಶವ ಪತ್ತೆಯಾಗಿದೆ. ಪ್ಲಾಸ್ಟಿಕ್ ಚೀಲದಲ್ಲಿ ಅರೆ ಸುಟ್ಟ ಸ್ಥಿತಿಯಲ್ಲಿ ಬಾಬು ಶವ ಪತ್ತೆಯಾಗಿದೆ. ಬೆಂಗಳೂರಿನಿಂದ ಬಾಬುನನ್ನು ಅಪಹರಿಸಿ ಕೊಲೆ ಮಾಡಿರುವ ಶಂಕೆ ವ್ಯರ್ಥವಾಗಿದೆ. ಸದ್ಯ ತಮಿಳುನಾಡಿನ ತಳಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.