ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳು ಮತ್ತು ಡ್ರಗ್ ಪೆಡ್ಲರ್ ಗಳ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. 150 ಕ್ಕೂ ಅಧಿಕ ರೌಡಿಶೀಟರ್ ಗಳ ನಿವಾಸಗಳ ಮೇಲೆ 600 ಕ್ಕೂ ಅಧಿಕ ಪೊಲೀಸರಿಂದ ದಾಳಿ ನಡೆಸಲಾಗಿದೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ರೌಡಿಶೀಡರ್ ಗಳು, ಡ್ರಗ್ ಪೆಡ್ಲರ್ ಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಬೆಂಗಳೂರಿನ ಕಾಟನ್ ಪೇಟೆ, ಚಾಮರಾಜಪೇಟೆ, ಬ್ಯಾಟರಾಯನಪುರ, ಜೆಜೆ ನಗರ, ಕೆಪಿ ಅಗ್ರಹಾರ ಪೊಲೀಸ್ ಠಾಣೆ, ಮಾಗಡಿ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಅನೇಕರಿಗೆ ಸಮನ್ಸ್ ನೀಡಿದ್ದರೂ, ಹಾಜರಾಗದೇ ತಲೆಮರೆಸಿಕೊಂಡು ಓಡಾಡುತ್ತಿದ್ದರು. ಠಾಣೆಗೆ ಕರೆತಂದು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗದಂತೆ ವಾರ್ನಿಂಗ್ ಮಾಡಿದ್ದಾರೆ.