
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳಿಗೆ ಪೊಲೀಸರು ಶಾಕ್ ನೀಡಿದ್ದಾರೆ. ನಗರದ 8 ವಿಭಾಗಗಳ ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರ ಸೂಚನೆ ಮೇರೆಗೆ ಬೆಂಗಳೂರಿನ 8 ವಿಭಾಗದ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಒಂದು ಸಾವಿರಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳಿಯ ವೇಳೆ ಹಲವರ ಮನೆಗಳಲ್ಲಿ ಮಾರಕಸ್ತ್ರಗಳು, ಗಾಂಜಾ ಪತ್ತೆಯಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.