alex Certify ದರ್ಶನ್ ಗೆ ರಾಜಾತಿಥ್ಯ ಪ್ರಕರಣ: ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಬೆಳಗಾವಿ ಜೈಲಿಗೆ ಶಿಫ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದರ್ಶನ್ ಗೆ ರಾಜಾತಿಥ್ಯ ಪ್ರಕರಣ: ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಬೆಳಗಾವಿ ಜೈಲಿಗೆ ಶಿಫ್ಟ್

ಬೆಂಗಳೂರು: ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಬೆಳಗಾವಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ನಾಗ ರಾಜಾತಿಥ್ಯ ಕಲ್ಪಿಸಿದ್ದನೆನ್ನಲಾಗಿತ್ತು. ನಂತರದಲ್ಲಿ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದ್ದು, ಅವರೊಂದಿಗೆ ಬಂಧಿತರಾಗಿದ್ದ ಇತರೆ ಆರೋಪಿಗಳನ್ನು ಶಿವಮೊಗ್ಗ, ಮೈಸೂರು, ಧಾರವಾಡ, ಕಲಬುರಗಿ ಜೈಲುಗಳಿಗೆ ಶಿಫ್ಟ್ ಮಾಡಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ವಿಲ್ಸನ್ ಗಾರ್ಡನ್ ನಾಗನನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ರೌಡಿಶೀಟರ್ ನಾಗ ಸೇರಿದಂತೆ ನಾಲ್ವರು ಆರೋಪಿಗಳನ್ನು ಶಿಫ್ಟ್ ಮಾಡಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...