ಈ ಬಾರಿಯ ಐಪಿಎಲ್ ಪಂದ್ಯಗಳು ಒಂದಕ್ಕಿಂತ ಒಂದು ಭರ್ಜರಿ ಮನರಂಜನೆ ನೀಡುತ್ತಿದ್ದು, ನಿನ್ನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ಎದುರು 12 ರನ್ ಗಳಿಂದ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಎಲ್ಲಾ ತಂಡಗಳು ತಮ್ಮ ಓಂ ಗ್ರೌಂಡ್ ನಲ್ಲಿ ಜಯಭೇರಿಯಾಗಿವೆ.
ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಮುಖಮುಖಿಯಾಗುತ್ತಿದ್ದು, ಮತ್ತೊಂದು ರೋಚಕ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಎರಡು ತಂಡಗಳ ನಡುವೆ ದೊಡ್ಡ ಇತಿಹಾಸವೇ ಇದೆ. ಈ ಪಂದ್ಯಕ್ಕಾಗಿ ಕಾದಿದ್ದ ಕ್ರಿಕೆಟ್ ಪ್ರೇಮಿಗಳು ಇಂದು ಸಂಭ್ರಮಿಸಲು ಸಜ್ಜಾಗಿದ್ದಾರೆ. ಕಳೆದ ಬಾರಿಯಂತೆ ಆರ್ಸಿಬಿ ತಂಡಕ್ಕೆ ‘kgf’ ಎಂಬ ಟೈಟಲ್ ಇಟ್ಟರೆ, ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ‘rrr’ ಎಂಬ ಶೀರ್ಷಿಕೆ ಇಡಲಾಗಿದೆ. ಇಂದು ಯಾವ ತಂಡಕ್ಕೆ ವಿಜಯದ ಮಾಲೆ ಒಲಿಯಲಿದೆ ಕಾದು ನೋಡಬೇಕಾಗಿದೆ.