alex Certify WPL: ಡೆಲ್ಲಿ ಮಣಿಸಿದ RCB ಚಾಂಪಿಯನ್: ‘ಈ ಸಲ ಕಪ್ ನಮ್ದು’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

WPL: ಡೆಲ್ಲಿ ಮಣಿಸಿದ RCB ಚಾಂಪಿಯನ್: ‘ಈ ಸಲ ಕಪ್ ನಮ್ದು’

ನವದೆಹಲಿ: ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ WPL ಫೈನಲ್ ಪಂದ್ಯದ್ಲಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8 ವಿಕೆಟ್‌ಗಳಿಂದ ಅದ್ಭುತ ಗೆಲುವು ಸಾಧಿಸುವ ಮೂಲಕ ತಮ್ಮ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಫೈನಲ್ ಪಂದ್ಯದಲ್ಲಿ ದೆಹಲಿ ತಂಡವನ್ನು ಮಾಡಿ 8 ವಿಕೆಟ್ ಗಳಿಂದ ಮಣಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 18.3 ಓವರ್ ಗಳಲ್ಲಿ 113 ರನ್ ಗಳಿಸಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ ಗಳಲ್ಲಿ ಎರಡು ವಿಕೆಟ್ ಗೆ 115 ರನ್ ಗಳಿಸಿ ಭರ್ಜರಿ 8 ವಿಕೆಟ್ ಗಳ ಜಯ ಸಾಧಿಸಿದೆ

ಆರ್.ಸಿ.ಬಿ. ಮಹಿಳಾ ತಂಡ ವುಮೆನ್ಸ್ ಪ್ರೀಮಿಯರ್ ಲೀಗ್ ನಲ್ಲಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಕನ್ನಡತಿ ಶ್ರೇಯಾಂಕಾ ಪಾಟೀಲ್ 4 ವಿಕೆಟ್ ಪಡೆದರು, ಶ್ರೇಯಾಂಕಾ WPL ಫೈನಲ್‌ನಲ್ಲಿ ಮತ್ತು ಅವರ T20 ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನ ನೀಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...