ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹೋದರ ದಿನಕರ್ ನಿರ್ದೇಶಿಸಿರುವ ‘ರಾಯಲ್’ ಚಿತ್ರದ ಶೂಟಿಂಗ್ ಈಗಾಗಲೇ ಅಂತಿಮ ಘಟ್ಟದಲ್ಲಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ. ಇದೀಗ ರಾಯಲ್ ಚಿತ್ರ ತಂಡ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡುವ ಮೂಲಕ ಪ್ರೇಕ್ಷಕರಿಗೆ ಗುಡ್ ನ್ಯೂಸ್ ನೀಡಿದೆ. ಮುಂದಿನ ತಿಂಗಳು ಜನವರಿ 24ಕ್ಕೆ ಈ ಸಿನಿಮಾ ತೆರೆ ಮೇಲೆ ಬರಲಿದೆ.
ಈ ಚಿತ್ರವನ್ನು ಜಯಣ್ಣ ಫಿಲಂಸ್ ಬ್ಯಾನರ್ ನಲ್ಲಿ ಜಯಣ್ಣ ಭೋಗೇಂದ್ರ ನಿರ್ಮಾಣ ಮಾಡಿದ್ದು, ವಿರಾಟ್ ಹಾಗೂ ಸಂಜನಾ ಆನಂದ್ ಪ್ರಮುಖ ಪಾತ್ರದಲ್ಲಿದ್ದಾರೆ, ಇನ್ನುಳಿದಂತೆ ರಘು ಮುಖರ್ಜಿ, ಛಾಯಾ ಸಿಂಗ್, ಅಚ್ಯುತ್ ಕುಮಾರ್, ರಂಗಾಯಣ ರಘು, ಪ್ರಮೋದ್ ಶೆಟ್ಟಿ, ಗೋಪಾಲ್ ದೇಶ್ಪಾಂಡೆ ಉಳಿದ ತಾರಾಂಗಣ. ಚರಣ್ ರಾಜ್ ಎಂ ಆರ್ ಸಂಗೀತ ಸಂಯೋಜನೆ ನೀಡಿದ್ದು, ಕೆಎಂ ಪ್ರಕಾಶ್ ಸಂಕಲನ, ಡಾ. ಕೆ. ರವಿ ವರ್ಮ ಅವರ ಸಾಹಸ ನಿರ್ದೇಶನ, ರಘು ನಿಡುವಳ್ಳಿ ಸಂಭಾಷಣೆ, ಹಾಗೂ ಸಂಕೇತ್ ಛಾಯಾಗ್ರಹಣವಿದೆ.