ನವದೆಹಲಿ : ರೋಜ್ ಗಾರ್ ಯೋಜನೆಯಡಿ ವಿವಿಧ ಉದ್ಯೋಗಳಿಗೆ ಹೊಸದಾಗಿ ನೇಮಕವಾಗಿರುವ ಸುಮಾರು 70 ಸಾವಿರಕ್ಕೂ ಹೆಚ್ಚು ಮಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 10.30 ಕ್ಕೆ ನೇಮಕಾತಿ ಪತ್ರ ವಿತರಿಸಲಿದ್ದಾರೆ.
ದೇಶಾದ್ಯಂತ ರೋಜ್ ಗಾರ್ ಯೋಜನೆಯಡಿ ಹೊಸ ನೇಮಕಾತಿಯಲ್ಲಿ ಉದ್ಯೋಗ ಪಡೆದ ಕಂದಾಯ ಇಲಾಖೆ, ಅಂಚೆ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಣಕಾಸು ಇಲಾಖೆ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಸೇರಿ ವಿವಿಧ ಸಚಿವಾಲಯಗಳು ಹಾಗೂ ಕೇಂದ್ರ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಹೊಸ ನೇಮಕಾತಿಯ ಉದ್ಯೋಗಿಗಳು ಸೇವೆ ಸಲ್ಲಿಸಲಿದ್ದಾರೆ.
ಕೇಂದ್ರ ಸರ್ಕಾರವು ರೋಜ್ ಗಾರ್ ಮೇಳೆ ನಡೆಸುತ್ತಿದ್ದು, ಈ ಯೋಜನೆಯಡಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ದೇಶದ 44 ಸ್ಥಳಗಳಲ್ಲಿ ರೋಜ್ ಗಾರ್ ಮೇಳವನ್ನು ಆಯೋಜಿಸಲಾಗಿದೆ.