alex Certify ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ಘರ್ಷಣೆ: ಅಭ್ಯರ್ಥಿ ಕುಸುಮಾರನ್ನು ತಳ್ಳಿದ್ದಾಗಿ ಪೊಲೀಸರ ವಿರುದ್ಧ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ಘರ್ಷಣೆ: ಅಭ್ಯರ್ಥಿ ಕುಸುಮಾರನ್ನು ತಳ್ಳಿದ್ದಾಗಿ ಪೊಲೀಸರ ವಿರುದ್ಧ ಪ್ರತಿಭಟನೆ

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದಲ್ಲಿ ಬಿಜೆಪಿ -ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಯಶವಂತಪುರ ಠಾಣೆ ಮುಂಭಾಗ ಬಿಗುವಿನ ವಾತಾವರಣ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ ಕೆಎಸ್ಆರ್ಪಿ ತುಕಡಿ ನಿಯೋಜಿಸಲಾಗಿದೆ. ಪ್ರಚಾರದ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಗಲಾಟೆ ವೇಳೆ ಪೊಲೀಸರು ಬಿಜೆಪಿ ಪರ ಬೆಂಬಲಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ಗಲಾಟೆ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದ್ದು, ಈ ವೇಳೆ ಪೊಲೀಸರ ಜೊತೆ ಸೇರಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಅಲ್ಲದೇ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರನ್ನು ಪೊಲೀಸರು ತಳ್ಳಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನ್ಯಾಯ ಬೇಕೆಂದು ಯಶವಂತಪುರ ಠಾಣೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...