ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಮುಂದುವರೆದಿದ್ದು, ನಾಲ್ಕನೇ ಸುತ್ತಿನ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ 15,110 ಮತಗಳನ್ನು ಗಳಿಸಿ 6418 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಕುಸುಮಾ 8692 ಮತ ಗಳಿಸಿದ್ದು, ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ 2500 ಮತ ಗಳಿಸಿದ್ದಾರೆ. ಅದೇ ರೀತಿ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 3224 ಮತ ಗಳಿಸಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ 2429, ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ 1135 ಮತ ಗಳಿಸಿದ್ದಾರೆ.