ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಕಲಿತ ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿ ಹಾಗೂ ಕುಪ್ಪೇಗಾಲ ಸರ್ಕಾರಿ ಶಾಲೆಗಳಿಗೆ 10 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ರಾಜ್ಯದ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಆರಂಭಿಸಿರುವ ನನ್ನ ಶಾಲೆ-ನಮ್ಮ ಜವಾಬ್ದಾರಿ ಅಭಿಯಾನದ ಭಾಗವಾಗಿ ತಾವು ಕಲಿತ ಎರಡು ಶಾಲೆಗಳಿಗೆ ೧೦ ಲಕ್ಷ ರೂ. ದೇಣಿಗೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಕ್ರಾಂತಿಕಾರಕ ಯೋಜನೆಯಾದ “ನಮ್ಮ ಶಾಲೆ ನಮ್ಮ ಜವಾಬ್ದಾರಿ” – ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ತಾವು ಓದಿದ ಸರ್ಕಾರಿ ಕುಪ್ಪೇಗಾಲದ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕೆ.ಪಿ.ಎಸ್ ಸಿದ್ದರಾಮನಹುಂಡಿ ಶಾಲೆಗೆ 10 ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಉದ್ಘಾಟಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ, ಕೈಗಾರಿಕಾ ಸಚಿವರಾದ ಎಂ. ಬಿ.ಪಾಟೀಲ್ , ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ಉನ್ನತ ಶಿಕ್ಷಣ ಸಚಿವರಾದ ಸುಧಾಕರ್, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.